ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ವಿತರಣೆ

Advertisement
 

ರಾಯಚೂರು,ಮೇ.06. ಮೇ-2023ರ ಮಾಹೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರಾಯಚೂರು ಜಿಲ್ಲೆಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 14 ಕೆ.ಜಿ ಜೋಳ ಮತ್ತು 21 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು ಪಿ.ಹೆಚ್.ಹೆಚ್(ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 02 ಕೆ.ಜಿ ಜೋಳ ಮತ್ತು 03 ಕೆ.ಜಿ ಸಾರವರ್ಧಿತ , ಅಕ್ಕಿ ಹಾಗೂ ಪಿ.ಹೆಚ್.ಹೆಚ್ (ಬಿ.ಪಿ.ಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ ಹೆಚ್ಚುವರಿಯಾಗಿ 01 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಒಪ್ಪಿಗೆ/ಸಮ್ಮತಿ ಸೂಚಿಸಿರುವ ಎಪಿಎಲ್ (ಎನ್‌ಪಿಹೆಚ್‌ಹೆಚ್) ಪಡಿತರ ಚೀಟಿದಾರರಿಗೆ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ ರೂ.15/-ರಂತೆ ಏಕ ಸದ್ಯಸರ ಪಡಿತರ ಚೀಟಿಗೆ ೦೫ ಕೆ.ಜಿ ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಕುಟುಂಬ ಸದಸ್ಯರಿರುವ ಎಪಿಎಲ್ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಒಂದು ರಾಷ್ಟ್ರ ಒಂದು ಪಡಿತರ ಚೀಟಿ(ಅಂತರ್ ರಾಜ್ಯ/ ಅಂತರ್ ಜಿಲ್ಲೆ) ಪೋರ್ಟೆಬಿಲಿಟೆ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರರ ಕಛೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಛೇರಿಗೆ ದೂರನ್ನು ಸಲ್ಲಿಸಬಹುದಾಗಿದೆ.

ಈ ಯೋಜನೆಯಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಈ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾವುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿಜನಗಣತಿ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಪೂವಿತಾ ಎಸ್"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!