ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಅಕ್ಟೋಬರ್ 04ರಂದು ರಾಯಚೂರಿಗೆ ಕೇಂದ್ರ ಬರ ಅಧ್ಯಯನ ತಂಡ

ದೇವದುರ್ಗ, ಅರಕೇರಾ, ರಾಯಚೂರು, ಮಸ್ಕಿ ಹಾಗೂ ಲಿಂಗಸುಗೂರು ತಾಲೂಕುಗಳಲ್ಲಿ ಬೆಳೆಹಾನಿ ಪರಿಶೀಲನೆ

Advertisement

ರಾಯಚೂರು: ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಬೆಳೆಹಾನಿ ಕುರಿತು ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರದ ಅಂತರ ಸಚಿವಾಲಯದ ಬರ ಅಧ್ಯಯನ ತಂಡವು ಇಂದು, ಅಕ್ಟೋಬರ್ 04ರಂದು ರಾಯಚೂರು ಜಿಲ್ಲೆಗೆ ಭೇಟಿ ನೀಡಲಿದೆ. ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು, ಐಎಎಸ್ ಅವರ ನೇತೃತ್ವದಲ್ಲಿ 10 ಸದಸ್ಯರನ್ನು ಒಳಗೊಂಡ ಮೂರು ಉಪತಂಡಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬರ ವೀಕ್ಷಣೆ ನಡೆಸುತ್ತಿವೆ.

Advertisement

ರಾಯಚೂರು ಜಿಲ್ಲೆಗೆ ಆಗಮಿಸುವ ಮೂರನೇ ತಂಡಕ್ಕೆ ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಡಾ. ಮಾನ್ ಸಿಂಗ್ ಅವರು ಮುಖ್ಯಸ್ಥರಾಗಿದ್ದಾರೆ. ವೆಚ್ಚ ಇಲಾಖೆಯ ಅಧೀನ ಕಾರ್ಯದರ್ಶಿ ಪಾರ್ಥ ಪಾಲ್ ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ರಾಕೇಶ್ ಕುಮಾರ್ ತಂಡದಲ್ಲಿದ್ದಾರೆ. ಕೇಂದ್ರ ತಂಡವು ಮಧ್ಯಾಹ್ನ ಯಾದಗಿರಿ ಜಿಲ್ಲೆಯ ಶಹಾಪುರದಿಂದ ರಾಯಚೂರು ಜಿಲ್ಲೆಯ ದೇವದುರ್ಗಕ್ಕೆ ಆಗಮಿಸಿ, ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದೆ.

ನಂತರ ಮಸರಕಲ್ ಗ್ರಾಮದಲ್ಲಿ ಹತ್ತಿ ಹಾಗೂ ಮೆಣಸಿನಕಾಯಿ ಬೆಳೆ ಹಾನಿ, ಅರಕೇರಾ ತಾಲೂಕಿನ ಎನ್. ಗಣೇಕಲ್ ಗ್ರಾಮದಲ್ಲಿ ವಿಬಿಜಿ ರಾಮ್‌ಜಿ ಕಾಮಗಾರಿ ಹಾಗೂ ಹತ್ತಿ ಬೆಳೆ ಕ್ಷೇತ್ರ ಪರಿಶೀಲಿಸಲಿದೆ. ಮುಂದುವರಿದು ರಾಯಚೂರು ತಾಲೂಕಿನ ಮರ್ರಾನಪುರ ಗ್ರಾಮದಲ್ಲಿ ಹತ್ತಿ ಬೆಳೆ ಕ್ಷೇತ್ರ ಹಾಗೂ ಮೇವಿನ ಮಿನಿಕಿಟ್ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದೆ. ನಂತರ ಮಸ್ಕಿ ತಾಲೂಕಿನ ಕೋಟ್ನೆಕಲ್ ಗ್ರಾಮದಲ್ಲಿ ಹತ್ತಿ ಬೆಳೆ, ಲಿಂಗಸುಗೂರು ತಾಲೂಕಿನ ಸರ್ಜಾಪುರ ಹಾಗೂ ಯರಡೋಣ ಗ್ರಾಮಗಳಲ್ಲಿ ತೊಗರಿ ಬೆಳೆ ಕ್ಷೇತ್ರಗಳನ್ನು ವೀಕ್ಷಿಸಲಿದೆ. ಕೇಂದ್ರ ಬರ ಅಧ್ಯಯನ ತಂಡದ ಈ ಭೇಟಿಯಿಂದ ಜಿಲ್ಲೆಯ ಬರ ಪರಿಸ್ಥಿತಿ, ಬೆಳೆಹಾನಿ ಹಾಗೂ ರೈತರ ಸಮಸ್ಯೆಗಳ ವಾಸ್ತವ ಸ್ಥಿತಿ ಕೇಂದ್ರ ಸರ್ಕಾರದ ಗಮನಕ್ಕೆ ಬರಲಿದೆ. ತಂಡದ ವರದಿ ಆಧರಿಸಿ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ.

— ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿಜನಗಣತಿ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಪೂವಿತಾ ಎಸ್"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!