ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿ

ರಾಯಚೂರು ಜಿಲ್ಲೆಯಲ್ಲಿ 1.63 ಲಕ್ಷ ಫಲಾನುಭವಿಗಳ ಇ-ಕೆವೈಸಿ ಬಾಕಿ; ಆಹಾರ ಇಲಾಖೆ ಸೂಚನೆ

Advertisement

ರಾಯಚೂರು: ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಸದಸ್ಯರ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ನವೆಂಬರ್ 30ರೊಳಗಾಗಿ ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸೂಚನೆ ನೀಡಿದೆ. ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಫಲಾನುಭವಿಯ ಇ-ಕೆವೈಸಿಯನ್ನು ಪ್ರತಿ ಐದು ವರ್ಷಗಳಿಗೊಮ್ಮೆ ನವೀಕರಿಸುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಐದು ವರ್ಷಗಳ ಅವಧಿ ಪೂರ್ಣಗೊಂಡ ಒಟ್ಟು 9,50,029 ಫಲಾನುಭವಿಗಳ ಪೈಕಿ ಈಗಾಗಲೇ 7,86,143 ಫಲಾನುಭವಿಗಳ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಂಡಿದೆ. ಇನ್ನುಳಿದ 1,63,886 ಫಲಾನುಭವಿಗಳ ಇ-ಕೆವೈಸಿ ಪ್ರಕ್ರಿಯೆ ಬಾಕಿ ಉಳಿದಿದೆ. ಬಾಕಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳ ಡೀಲರ್‌ಗಳಿಗೆ ಇಲಾಖೆ ಸೂಚನೆ ನೀಡಿದೆ.

Advertisement

ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿ

ಇ-ಕೆವೈಸಿ ಮಾಡಿಸಿಕೊಳ್ಳದಿರುವ ಫಲಾನುಭವಿಗಳು ತಮ್ಮ ಪಡಿತರ ಚೀಟಿಗೆ ಜೋಡಣೆಯಾಗಿರುವ ನ್ಯಾಯಬೆಲೆ ಅಂಗಡಿಗೆ ಖುದ್ದಾಗಿ ಭೇಟಿ ನೀಡಿ ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇದರ ಜೊತೆಗೆ ಸರ್ಕಾರವು 'ಅನ್ನ ಸೇವೆ' ಮೊಬೈಲ್ ಆ್ಯಪ್ ಮೂಲಕವೂ ಇ-ಕೆವೈಸಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿದೆ.

ಇ-ಕೆವೈಸಿ ಸಂಪೂರ್ಣ ಉಚಿತ

ಇ-ಕೆವೈಸಿ ಪ್ರಕ್ರಿಯೆಗೆ ಯಾವುದೇ ಶುಲ್ಕ ಇರುವುದಿಲ್ಲ. ಫಲಾನುಭವಿಗಳು ಈ ಪ್ರಕ್ರಿಯೆಗಾಗಿ ಯಾರಿಗೂ ಹಣ ಪಾವತಿಸುವ ಅಗತ್ಯವಿಲ್ಲ. ಸಂಪೂರ್ಣ ಉಚಿತವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ. ಆದ್ದರಿಂದ ಬಾಕಿ ಉಳಿದಿರುವ ಫಲಾನುಭವಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬೇಕು ಎಂದು ಇಲಾಖೆ ಮನವಿ ಮಾಡಿದೆ.

ಇ-ಕೆವೈಸಿ ಮಾಡಿಸದಿದ್ದರೆ ಹೆಸರು ತೆಗೆದುಹಾಕುವ ಕ್ರಮ

ನಿಗದಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದ ಫಲಾನುಭವಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಪಡಿತರ ಚೀಟಿಯಿಂದ ಅಂತಹ ಸದಸ್ಯರ ಹೆಸರನ್ನು ತೆಗೆದುಹಾಕುವ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೀಗಾಗಿ ಪಡಿತರ ಚೀಟಿದಾರರು ನವೆಂಬರ್ 30ರೊಳಗಾಗಿ ತಮ್ಮ ಕುಟುಂಬದ ಎಲ್ಲಾ ಬಾಕಿ ಸದಸ್ಯರ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ ಪಡಿತರ ಸೌಲಭ್ಯದಲ್ಲಿ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ನಿರುದ್ಯೋಗಿ ಪದವೀಧರರೇ ಗಮನಿಸಿ: ನವೆಂಬರ್ 13ಕ್ಕೆ ನೇರ ಸಂದರ್ಶನ!ನವೆಂಬರ್ 30ರೊಳಗೆ ಪಡಿತರ ಚೀಟಿದಾರರು ಇ-ಕೆವೈಸಿ ಪೂರ್ಣಗೊಳಿಸಿವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ: ಧೈರ್ಯ, ಸಾಹಸದ ಸ್ಮರಣೆಕಂದಾಯ ಇಲಾಖೆಯಲ್ಲಿ ದಿಢೀರ್ ಮೇಜರ್ ಸರ್ಜರಿ! ರಾಜ್ಯದ 35 ತಹಶೀಲ್ದಾರ್‌ಗಳ ವರ್ಗಾವಣೆಹೆಗಲ ಮೇಲೆ ಕಟ್ಟಿಗೆ… ಹೃದಯದಲ್ಲಿ ಭಕ್ತರ ಹಸಿವಿನ ಚಿಂತೆ!ಚಾಲಕ ಸಹಿತ 16 ವಾಹನಗಳಿಗೆ ಆರೋಗ್ಯ ಇಲಾಖೆಯಿಂದ ಅರ್ಜಿ ಆಹ್ವಾನKPSC ನೇಮಕಾತಿ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪುಯುವಜನತೆ ನಶಾ ಪದಾರ್ಥಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಜಿಲ್ಲಾಧಿಕಾರಿಜನಗಣತಿ ಕಾರ್ಯ ಯಶಸ್ವಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲಿ:ಜಿಲ್ಲಾಧಿಕಾರಿ ಪೂವಿತಾ ಎಸ್"ಮಕ್ಕಳ ಡಿಜಿಟಲ್ ಸುರಕ್ಷತೆಗೆ ರಾಷ್ಟ್ರೀಯ ವೇದಿಕೆಯಲ್ಲಿ ಚರ್ಚೆ: ಒಡಿಶಾದಲ್ಲಿ ಮಕ್ಕಳ ಆಯೋಗದ ಪ್ರತಿನಿಧಿಗಳ ಭಾಗಿ"ಮಕ್ಕಳ ಹಕ್ಕುಗಳ ರಕ್ಷಣ ಆಯೋಗ 5 ಮತ್ತು 6ರಂದು ಯಾದಗಿರಿ ಜಿಲ್ಲೆಗೆ ಭೇಟಿಕುಡಿಯುವ ನೀರಿಗಾಗಿ ಹಾಹಾಕಾರ: ರಸ್ತೆಗೆ ಇಳಿದ ಬುಕ್ಕನಟ್ಟಿ ಗ್ರಾಮಸ್ಥರುಐದನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಶಶೀಲ್ ಜಿ. ನಮೋಶಿ ಅವರಿಗೆ ಕೆ. ಕರಿಯಪ್ಪ ಅಭಿನಂದನೆಎರಡು ತಿಂಗಳ ಮಗುವಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣದಂತಿರುವ ರಚನೆ!12 ವರ್ಷಗಳ ಬಳಿಕ ತುರ್ವಿಹಾಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪುನರಾರಂಭ!