ePaper
ರಾಜಕೀಯವ್ಯಾಪಾರವಿದ್ಯಾಭ್ಯಾಸತಂತ್ರಜ್ಞಾನಮನರಂಜನೆಕ್ರೀಡೆಆರೋಗ್ಯವೈಶಿಷ್ಟ್ಯಪ್ರಯಾಣಸೌಂದರ್ಯಪಾಕವಿಧಾನಗಳು

ಸರ್ಕಾರಿ ಪಿಯುಸಿ ವಿದ್ಯಾರ್ಥಿ ನಿಲಯಕ್ಕೆ ಬಾಡಿಗೆ ಕಟ್ಟಡ ಅಗತ್ಯ – ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನ

Advertisement

ಸಿಂಧನೂರು, ಜುಲೈ 2: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಪಿಯುಸಿ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಬಾಡಿಗೆ ಕಟ್ಟಡದ ಅಗತ್ಯವಿದ್ದು, ಸೂಕ್ತ ಕಟ್ಟಡ ಹೊಂದಿರುವ ಆಸಕ್ತ ಮಾಲೀಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿಂಧನೂರು ಪಟ್ಟಣದಲ್ಲಿರುವ ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಈ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಹೆಚ್ಚುವರಿ ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸುವ ಉದ್ದೇಶದಿಂದ ಹೊಸ ಕಟ್ಟಡವನ್ನು ಬಾಡಿಗೆ ಆಧಾರದ ಮೇಲೆ ಪಡೆಯಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ.

Advertisement

ಸುಮಾರು 100 ರಿಂದ 200 ವಿದ್ಯಾರ್ಥಿಗಳು ವಾಸಿಸಲು ಅನುಕೂಲವಾಗುವಂತೆ ವಿಶಾಲ, ಸುರಕ್ಷಿತ ಹಾಗೂ ಮೂಲಸೌಕರ್ಯಗಳನ್ನು ಹೊಂದಿರುವ ಕಟ್ಟಡ ಬೇಕಾಗಿದ್ದು, ಸಂಬಂಧಿತ ನಿಯಮಗಳು ಮತ್ತು ಇಲಾಖೆಯ ಮಾನದಂಡಗಳಿಗೆ ಅನುಗುಣವಾಗಿರುವ ಕಟ್ಟಡಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬಾಡಿಗೆಗೆ ಕಟ್ಟಡ ನೀಡಲು ಆಸಕ್ತಿ ಹೊಂದಿರುವ ಕಟ್ಟಡ ಮಾಲೀಕರು ತಮ್ಮ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸಿಂಧನೂರು ಕಚೇರಿಯನ್ನು ಸಂಪರ್ಕಿಸಬಹುದು.

 

ಸಂಪರ್ಕ ವಿವರಗಳು:

ಕಚೇರಿ ದೂರವಾಣಿ: 08535-295527. ಮೊಬೈಲ್: 9480843185 ಇ-ಮೇಲ್: [email protected] ಹೆಚ್ಚಿನ ಮಾಹಿತಿಗಾಗಿ ಆಸಕ್ತ ಕಟ್ಟಡ ಮಾಲೀಕರು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಇಲಾಖೆಯು ಮನವಿ ಮಾಡಿದೆ.

Advertisement

Advertisement

WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

ePaper SHARE
LATEST
ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾ ನ್ಯಾಯಾಧೀಶರ ಪರಿಶೀಲನೆ ಸಿಂಧನೂರಿನಲ್ಲಿ ಸಂತಾನ ಬಂಜೆತನ ಚಿಕಿತ್ಸೆಗೆ ಹೊಸ ಆಶಾಕಿರಣವಿದ್ಯಾರ್ಥಿಗಳಿಗೆ ಬಸ್ ಕಿರಿಕಿರಿ! ಬಸ್ ಸಿಬ್ಬಂದಿ ವಿರುದ್ಧ ಆರೋಪಮಳೆ ಇಲ್ಲ, ಬೆಳೆ ಇಲ್ಲ, ನೀರಿಲ್ಲ... ತೆರಿಗೆ ಮಾತ್ರ ಕಟ್ಟಲೇಬೇಕು!ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ನಂದಿತಾ ಎಂ.ಎನ್. ಅಧಿಕಾರ ಸ್ವೀಕಾರಹಾವು ಬಿದ್ದ ಕೆರೆಯ ನೀರು ಕುಡಿಯಲು ಅಯೋಗ್ಯ: ಒಂದು ವಾರದಿಂದ 2,500ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಕಷ್ಟಅಕ್ರಮ ಮರಂ ಕ್ವಾರಿಯಲ್ಲಿ ಈಜಲು ಹೋಗಿ ಯುವ ವಕೀಲ ದಾರುಣ ಸಾವುಏಳು ವರ್ಷಗಳ ಹೋರಾಟಕ್ಕೆ ನ್ಯಾಯ: ಪರಿಹಾರ ನೀಡದ ಪಂಚಾಯಿತಿ ಕಚೇರಿ ಸಾಮಗ್ರಿ ಜಪ್ತಿತಮಿಳುನಾಡಿನ ಮಾದರಿ, ಕರ್ನಾಟಕಕ್ಕೆ ಯಾವಾಗ? ಜನರ ಕಷ್ಟಕ್ಕೆ ತಕ್ಷಣ ಸ್ಪಂದಿಸಿ: ಪರಶುರಾಮ್ ಮಲ್ಲಾಪುರಸರ್ಕಾರಿ ಆಸ್ಪತ್ರೆಯೋ? ಖಾಸಗಿ ಕ್ಲಿನಿಕ್‌ಗಳ ವೇಟಿಂಗ್ ರೂಮೋ?ಸರ್ಕಾರಕ್ಕೆ ನಾಚಿಕೆ ಇಲ್ಲ ಅತಿಥಿ ಉಪನ್ಯಾಸಕರಿಗೆ ಮೋಕ್ಷ ಇಲ್ಲ ಜಯಪ್ಪ ಗೋರೇಬಾಳ್ ಖಾಸಗಿ ಕಾಲೇಜುಗಳ ಬಡ ವಿದ್ಯಾರ್ಥಿಗಳಿಗೂ ಪಿಯು ಪ್ರವೇಶಾತಿ ದಂಡ ಶುಲ್ಕ ವಿನಾಯಿತಿ ವಿಸ್ತರಿಸಲು ಸಾರ್ವಜನಿಕರ ಆಗ್ರಹಕರೆಂಟ್ ಇಲ್ಲದೆ ಎಕ್ಸ್-ರೇ ಸ್ಥಗಿತ... ರೋಗಿಗಳ ಪರದಾಟ!ಬಿ.ಎ. ಅಂತಿಮ ವರ್ಷದ ಐಚ್ಛಿಕ ವಿಷಯಗಳ ಕಡಿತ: ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರ ಆತಂಕ2030ರೊಳಗೆ ಹೆಚ್‌ಐವಿ ಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲಾ ಇಲಾಖೆಗಳ ಸಮನ್ವಯ ಅಗತ್ಯ: ಡಾ. ಗಿರಿಜಾ ತಾಯಿ